BIG NEWS: 40 ಲಕ್ಷ ರೂ. ಮೌಲ್ಯದ ಕಳಪೆ ಔಷಧ ಜಪ್ತಿ

ಬೆಂಗಳೂರು: ರಾಜ್ಯಾದ್ಯಂತ ಜುಲೈನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ 1,000ಕ್ಕೂ ಅಧಿಕ ಔಷಧಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದು, ಗುಣಮಟ್ಟ ಹೊಂದಿರದ ಸುಮಾರು 40 ಲಕ್ಷ ರೂ.ಗೂ ಅಧಿಕ ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಮಾರಾಟವಾಗುತ್ತಿರುವ 1433 ಔಷಧ ಮಾದರಿಗಳನ್ನು ಬಳ್ಳಾರಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿರುವ ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. 1366 ಔಷಧ ಉತ್ತಮ ಗುಣಮಟ್ಟದಿಂದ ಕೂಡಿದ್ದು, 67 ಔಷಧ ಮಾದರಿ ಗುಣಮಟ್ಟ ಹೊಂದಿಲ್ಲದ ಔಷಧಗಳು ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುಣಮಟ್ಟ ಇಲ್ಲದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು 2 ದಿನ ಕಾಲಾವಕಾಶ ನೀಡಲಾಗಿದ್ದು, ಸುಮಾರು 40.48 ಲಕ್ಷ ರೂಪಾಯಿ ಮೌಲ್ಯದ ಗುಣಮಟ್ಟ ಇಲ್ಲದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿದೆ. ಹಾಲಿನ ಮಾದರಿ ವಿಶ್ಲೇಷಣೆಗಾಗಿ ಆಗಸ್ಟ್ ನಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read