HomeKarnatakaBIG NEWS : ರಾಜ್ಯದಲ್ಲಿ ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿ : ಸಿಎಂ ಸಿದ್ದರಾಮಯ್ಯ...

BIG NEWS : ರಾಜ್ಯದಲ್ಲಿ ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ಈ ಬಾರಿ ತೀವ್ರ ಬರಗಾಲ ಎದುರಾಗಿದೆ, ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಾಗಿ ಬರಗಾಲ ಉದ್ಭವಿಸಿದೆ. ಬರುವ ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಿ, ಸಮರ್ಪಕ ಕುಡಿಯುವ ನೀರು  ಪೂರೈಕೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಂಡು ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. 

ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳುಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ. ಪೂರ್ವ ಮುಂಗಾರು ಮಳೆಯನ್ನು ಕೆಲವೆಡೆ ನಿರೀಕ್ಷಿಸಲಾಗಿದೆ. ಆದಾಗ್ಯೂ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಸಿಇಓ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಯೋಜನೆ ರೂಪಿಸಬೇಕು.

ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿನ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಎಲ್ಲಾ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ರೂ.855 ಕೋಟಿ ಬರನಿರ್ವಹಣೆಯ ಅನುದಾನ ಲಬ್ಯವಿದ್ದು ಇದರೊಂದಿಗೆ ಪ್ರತಿ ಜಿಲ್ಲೆಗೆ ರೂ.2 ಕೋಟಿ ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ನರೇಗಾ ಉದ್ಯೋಗ ದಿನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಬರಗಾಲ ಸಂದರ್ಭದಲ್ಲಿ ನರೇಗಾದಡಿ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬರಗಾಲ ಇರುವುದರಿಂದ ಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬಹುದು. ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ತಾಲ್ಲೂಕು ಮಟ್ಟದ ಟಾಸ್ಕ್ ಫೆÇೀರ್ಸ್ ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಸೂಚನೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular