HomeKarnatakaBIG NEWS: 5 ಕೆಜಿ ಅಕ್ಕಿ ಮೋದಿ ಅವರದ್ದಲ್ಲ, ಯುಪಿಎ ಸರ್ಕಾರದ್ದು; ಬಿಜೆಪಿ ನಾಯಕರಿಗೆ ಟಾಂಗ್...

BIG NEWS: 5 ಕೆಜಿ ಅಕ್ಕಿ ಮೋದಿ ಅವರದ್ದಲ್ಲ, ಯುಪಿಎ ಸರ್ಕಾರದ್ದು; ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: 5 ಕೆಜಿ ಅಕ್ಕಿ ಕೊಡಲು ಆರಂಭ ಮಾಡಿದ್ದು ಯುಪಿಎ ಸರ್ಕಾರ. ಇದು ಪ್ರಧಾನಿ ನರೇಂದ್ರ ಮೋದಿಯವರ ಅಕ್ಕಿಯಲ್ಲ, ಯುಪಿಎ ಸರ್ಕಾರದ ಅಕ್ಕಿ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರತಾ ಕಾಯ್ದೆ ತಂದಿದ್ದೇವೆ. ಆ ಕಾಯ್ದೆ ಮೂಲಕ ಎಲ್ಲರಿಗೂ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ಅದನ್ನೇ ಮುಂದುವರೆಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಕೇಂದ್ರದ 5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಮಾತು ಕೊಟ್ಟಂತೆ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular