ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆಗಳನ್ನು ರಚಿಸಿ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನ ಉತ್ತಮ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿದ್ದು, ಇದರ ಅಡಿಯಲ್ಲಿ 5 ಪಾಲಿಕೆ ರಚಿಸಲಾಗುವುದು. ಈಗಾಗಲೇ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ. ಕೆಲವರು ವಿರೋಧಿಸುತ್ತಿದ್ದಾರೆ. ಆದರೆ ಆಡಳಿತದ ದೃಷ್ಟಿಯಿಂದ 5 ಪಾಲಿಕೆಗಳನ್ನು ರಚಿಸಿ ಶೀಘ್ರವೇ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.