ಬೆಂಗಳೂರು: ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಇಂದು ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ತುಂಬಲು ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 5 ಆಹಿಂದ ಸಮಾವೇಶಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಹುಬ್ಬಳ್ಳಿಯಿಂದಲೇ ಮೊದಲನೆಯ ಸಮಾವೇಶ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಭಾಗದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿಯೂ ಬೃಹತ್ ಸಮಾವೇಶ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಗೆ ಸಂದೇಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

