HomeLatest NewsBIG NEWS: ಬೆಂಗಳೂರಿನಲ್ಲಿ 60 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ಹೊಸ ಸ್ಟೇಡಿಯಂ ನಿರ್ಮಾಣಕ್ಕೆ 50 ಎಕರೆ...

BIG NEWS: ಬೆಂಗಳೂರಿನಲ್ಲಿ 60 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ಹೊಸ ಸ್ಟೇಡಿಯಂ ನಿರ್ಮಾಣಕ್ಕೆ 50 ಎಕರೆ ಜಾಗ ಗುರುತು

ಬೆಂಗಳೂರು: ಬೆಂಗಳೂರಿನಲ್ಲಿ 60,000 ಪ್ರೇಕ್ಷಕರ ಸಾಮರ್ಥ್ಯದ ನೂತನ ಸ್ಟೇಡಿಯಂ ನಿರ್ಮಾಣಕ್ಕೆ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಾಬು ಜಗಜೀವನ ರಾಮ್ ಭವನದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ನಡೆದ ಕೆಂಪೇಗೌಡ ಭವನ ಭೂಮಿ ಪೂಜೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿ, 60,000 ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಿದ್ದು, ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

500 ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದ ಕೆಂಪೇಗೌಡರು ಎಲ್ಲ ಜಾತಿ, ಧರ್ಮಗಳಿಗೆ ಅವಕಾಶ ನೀಡಿದ್ದರು. ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ಮಹಾನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಪೂರ್ತಿ ಎನ್ನುವುದನ್ನು ನಾವು ಮರೆಯಬಾರದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular