BIG NEWS: 6 ನಿಗಮಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ 11 ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read