BIG NEWS: 670 ಕೋಟಿ ರೂಪಾಯಿ ಮೊತ್ತದ ‘ವಿವಾದಾತ್ಮಕ’ ಟೆಂಡರ್ ಕೊನೆಗೂ ರದ್ದುಪಡಿಸಿದ ಬಿಡಿಎ

ಶಿವರಾಮ ಕಾರಂತ ಬಡಾವಣೆಯಲ್ಲಿ ಕೈಗೊಳ್ಳಲು ಉದ್ದೇಶಿಸಿದ್ದ 670 ಕೋಟಿ ರೂಪಾಯಿ ಮೊತ್ತದ ವಿವಾದಾತ್ಮಕ ವಿದ್ಯುತ್ ಕಾಮಗಾರಿ ಟೆಂಡರ್ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೊನೆಗೂ ರದ್ದುಪಡಿಸಿದೆ.

ಈ ಕುರಿತಂತೆ ಮಾರ್ಚ್ 10ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಆಡಳಿತಾತ್ಮಕ ಕಾರಣಗಳಿಂದಾಗಿ ಈ ಟೆಂಡರ್ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ನಿಯಮ ಮೀರಿ 670 ಕೋಟಿ ರೂಪಾಯಿಗಳ ಮೊತ್ತದ ಟೆಂಡರ್ ಕರೆಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತಲ್ಲದೆ, ಮಾಧ್ಯಮಗಳಲ್ಲಿಯೂ ಸಹ ಇದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಇದನ್ನು ಹೊರತುಪಡಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read