HomeKarnatakaBIG NEWS: 7ನೇ ವೇತನ ಆಯೋಗ ವಿಚಾರ; ಶೀಘ್ರದಲ್ಲಿ ಮಧ್ಯಂತರ ವರದಿ ಜಾರಿ; ಸಂಜೆ ಹಿರಿಯ...

BIG NEWS: 7ನೇ ವೇತನ ಆಯೋಗ ವಿಚಾರ; ಶೀಘ್ರದಲ್ಲಿ ಮಧ್ಯಂತರ ವರದಿ ಜಾರಿ; ಸಂಜೆ ಹಿರಿಯ ಅಧಿಕಾರಿಗಳ ಸಭೆ ಎಂದ ಸಿಎಂ

ಸಿದ್ದಾಪುರ: 7ನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರಿ ನೌಕರರು ನಮ್ಮವರು, ಅವರ ಬಗ್ಗೆ ನಮಗೆ ಕಾಳಜಿ ಇದೆ ಎಂದು ತಿಳಿಸಿದ್ದಾರೆ.

ಸಿದ್ದಾಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಸರ್ಕಾರಿ ನೌಕರರ ಸಂಘದ ಜೊತೆ ಸಿಎಸ್ ವಂದಿತಾ ಶರ್ಮಾ ಸಭೆ ನಡೆಸಿದ್ದಾರೆ. ಮಧ್ಯಂತರ ವರದಿ ಸಿದ್ಧಪಡಿಸಲಾಗುತ್ತಿದೆ. ವರದಿ ಬಂದ ಕೂಡಲೇ ವೇತನ ಪರಿಷ್ಕರಣೆ ಮಾಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮುಷ್ಕರ ತಡೆಯಲು ಎಸ್ಮಾ ಜಾರಿ ಚಿಂತನೆ ಸರ್ಕಾರದ ಮುಂದೆ ಇಲ್ಲ. ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ನಾಳೆಯೊಳಗೆ ಎಲ್ಲವೂ ಬಗೆಹರಿಯಲಿದೆ. ಮಧ್ಯಂತರ ವರದಿ ಬಳಿಕ ಪರಿಷ್ಕರಣೆ ಮಾಡುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular