BIG NEWS: 70 ವರ್ಷಗಳ ಕಾಲ ಕಾಂಗ್ರೆಸ್ ನವರು ಕಡುಬು ತಿನ್ನುತ್ತಿದ್ರಾ  ? ಮಾಜಿ ಸಿಎಂ BSY ವಾಗ್ದಾಳಿ

ದಾವಣಗೆರೆ: ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪದಿಸುತ್ತಾ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಒಂದು ದಿನವೂ ವಿಶ್ರಾಂತಿ ಪಡೆಯದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯ ಜಿಎಂಐಟಿ ಮೈದಾನದಲ್ಲಿ ನಡೆದ ಬಿಜೆಪಿ ಮಹಾಸಂಗಮ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ನಾವು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು. ಇನ್ನೆರಡು ತಿಂಗಳ ಕಾಲ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಜನರ ಮನ ಗೆಲ್ಲಬೇಕು. ಇದು ಬಿಜೆಪಿ ವಿಜಯ ಯಾತ್ರೆಯ ಆರಂಭ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅನೇಕ ಗ್ಯಾರಂಟಿ ಕಾರ್ಡ್ ಕೊಡುವ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಏನು ಮಾಡಿದರು? ಕಾಂಗ್ರೆಸ್ ನವರು 70 ವರ್ಷಗಳ ಕಾಲ ಕಡುಬು ತಿನ್ನುತ್ತಿದ್ರಾ? 70 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಯಾವುದೇ ಅಭಿವೃದ್ಧಿ ಕೆಲಸವನ್ನೂ ಮಾಡಿಲ್ಲ. ರಾಜ್ಯದ ಜನ ಕಾಂಗ್ರೆಸ್ ನ ಭರವಸೆಗಳನ್ನು ನಂಬುವ ಸ್ಥಿತಿಯಲ್ಲಿಲ್ಲ. ಅಧಿಕಾರಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಬಿಜೆಪಿ ಸಾಕಷ್ಟು ಅಬಿವೃದ್ಧಿ ಕೆಲಸಗಳನ್ನು ಮಾಡಿದೆ. ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read