 ಬೆಳಗಾವಿ: ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.
ಬೆಳಗಾವಿ: ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.
8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸ್ಮಾರಕವನ್ನು ಮೈಸೂರು, ಹಾಸನ ಜಿಲ್ಲೆಯಲ್ಲಿ ನಿರ್ಮಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಮೈಸೂರು ದಸರಾ ಉತ್ಸವದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಸರು ಬಳಿಯ ಅರಣ್ಯದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ಸಿಲುಕಿ ಮೃತಪಟ್ಟಿತು. ಮಂಗಳವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ.

		 Loading ...
 Loading ... 