ಬೆಂಗಳೂರು: ರಾಜ್ಯದ 800 ಸರ್ಕಾರಿ ಶಾಲೆಗಳನ್ನು 3200 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಶಾಲೆಗಳಾಗಿ ಉನ್ನತೀಕರಿಸಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತಾಗಿ ವಿಸ್ತೃತ ಯೋಜನೆ ವರದಿ ತಯಾರಿಸಲು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಅಧಿಕಾರ ನೀಡಲು ಸಂಪುಟ ಸಭೆ ನಿರ್ಧರಿಸಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, 800 ಪ್ರಮುಖ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತಿಕರಿಸಲು ತೀರ್ಮಾನಿಸಲಾಗಿದೆ. ಕೆಪಿಎಸ್ ಗೆ ಶಾಲೆಗಳನ್ನು ಉನ್ನತೀಕರಿಸುವ ವೇಳೆ ಕೆಲವು ಶಾಲೆಗಳನ್ನು ವಿಲೀನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
