HomeKarnatakaBIG NEWS: 99 % ನಾಳೆಯೇ ನೂತನ ಸಚಿವರ ಪ್ರಮಾಣವಚನ; ಸಚಿವ ರಾಮಲಿಂಗಾರೆಡ್ಡಿ

BIG NEWS: 99 % ನಾಳೆಯೇ ನೂತನ ಸಚಿವರ ಪ್ರಮಾಣವಚನ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನೂತನ ಸಚಿವರ ಪಟ್ಟಿ ಬಹುತೇಕ ಇಂದೇ ಫೈನಲ್ ಆಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಇಂದೇ ಸಚಿವರ ಪಟ್ಟಿ ಫೈನಲ್ ಆಗಲಿದೆ. 99% ನಾಳೆಯೇ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ರೆ ಹೋರಾಟ ಮಾಡುತ್ತೇವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಹೋರಾಟ ಮಾಡುವುದು ಬೇಡ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. ಆದರೆ ಬಿಜೆಪಿ ಕಳೆದ ಚುನಾವಣೆಯಲ್ಲಿ ಕೊಟ್ಟ 600 ಭರವಸೆಗಳಲ್ಲಿ 60 ಭರವಸೆ ಈಡೇರಿಸಿತ್ತು. ಪ್ರತಿಯೊಬ್ಬರಿಗೂ 15 ಲಕ್ಷ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಎಲ್ಲರ ಖಾತೆಗೂ ಹಣ ಹಾಕಿದ್ರಾ ? ನಾವೂ ಪರಿಶೀಲನೆ ಮಾಡುತ್ತೇವೆ ಎಂದು ಟಾಂಗ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular