HomeKarnatakaBIG NEWS: ದೇಶದ ಅಣೆಕಟ್ಟುಗಳ ಹೂಳು ತೆಗೆಯಲು ಕೇಂದ್ರದಿಂದ ಶೀಘ್ರದಲ್ಲೇ ಮಹತ್ವದ ಯೋಜನೆ

BIG NEWS: ದೇಶದ ಅಣೆಕಟ್ಟುಗಳ ಹೂಳು ತೆಗೆಯಲು ಕೇಂದ್ರದಿಂದ ಶೀಘ್ರದಲ್ಲೇ ಮಹತ್ವದ ಯೋಜನೆ

ಕೊಪ್ಪಳ: ದೇಶದಾದ್ಯಂತ ಇರುವ ಬಹುತೇಕ ಅಣೆಕಟ್ಟುಗಳಲ್ಲಿ ಶೇಕಡಾ 15 ಕ್ಕಿಂತಲೂ ಹೆಚ್ಚು ಹೂಳು ತುಂಬಿಕೊಂಡಿದ್ದು, ಇದರಿಂದ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ ಗಣನೀಯವಾಗಿ ಕುಸಿದಿದೆ. ಈ ಸಮಸ್ಯೆಯನ್ನು ಮನಗಂಡು ದೇಶದ ಅಣೆಕಟ್ಟುಗಳಿಂದ ಹೂಳು ತೆಗೆಯುವ(ಡಿ-ಸಿಲ್ಟಿಂಗ್) ಬೃಹತ್ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹೇಳಿದರು.

ಗುರುವಾರದಂದು ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಮುನಿರಾಬಾದ್‌ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತುಂಗಭದ್ರಾ ಜಲಾಶಯದಲ್ಲೂ ಶೇ. 15 ಕ್ಕಿಂತ ಹೆಚ್ಚು ಹೂಳು ತುಂಬಿಕೊAಡಿರುವುದನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಜಲಶಕ್ತಿ ಸಚಿವಾಲಯವು ಹೂಳು ತೆಗೆಯುವ ವಿಶೇಷ ಯೋಜನೆಯನ್ನು ರೂಪಿಸುತ್ತಿದೆ ಎಂದರು. ಈ ಯೋಜನೆಯ ತಾಂತ್ರಿಕ ಸಹಯೋಗವನ್ನು ಕೇಂದ್ರ ಸರ್ಕಾರ ನೀಡಲಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳು ಹೊರಬೇಕಾಗುತ್ತದೆ. ಈ ಯೋಜನೆ ಯಶಸ್ವಿಯಾದರೆ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯವನ್ನು ಶೇಕಡಾ 25 ರಿಂದ 30 ರಷ್ಟು ಹೆಚ್ಚಿಸಬಹುದಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳ ನಡುವೆ ನೀರು ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಆದರೆ ಇಂದು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಒಂದೇ ವೇದಿಕೆಗೆ ಬಂದು ಒಗ್ಗಟ್ಟು ಪ್ರದರ್ಶಿಸಿರುವುದನ್ನು ಸಚಿವರು ಮುಕ್ತಕಂಠದಿMದ ಶ್ಲಾಘಿಸಿದರು. ಯಾವುದೇ ಆಕ್ಷೇಪಣೆಗಳಿಲ್ಲದೆ, ಪರಸ್ಪರ ಸಹಕಾರ ಹಾಗೂ ಆರ್ಥಿಕ ನೆರವು ನೀಡಿದ್ದರಿಂದಲೇ ತುಂಗಭದ್ರಾ ಜಲಾಶಯಕ್ಕೆ ಕೇವಲ ಕೆಲವೇ ದಿನಗಳಲ್ಲಿ ನೂತನ ಗೇಟುಗಳನ್ನು ಅಳವಡಿಸಲು ಸಾಧ್ಯವಾಯಿತು ಎಂದು ಅವರು ಸ್ಮರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ ದೇಶವನ್ನು ರಸ್ತೆಗಳ ಮೂಲಕ ಹೇಗೆ ಜೋಡಿಸಲಾಗುತ್ತಿದೆಯೋ, ಅದೇ ರೀತಿ ನೀರಿನ ಯೋಜನೆಗಳ ಮೂಲಕವೂ ಇಡೀ ದೇಶವನ್ನು ಬೆಸೆಯಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ರೈತರಿಗೆ ಹೆಚ್ಚಿನ ನೀರು ಲಭ್ಯವಾದರೆ, ಅವರು ವರ್ಷಕ್ಕೆ ಒಂದರ ಬದಲು ಎರಡು ಬೆಳೆಗಳನ್ನು ತೆಗೆಯಲು ಸಾಧ್ಯವಾಗುತ್ತದೆ ಮತ್ತು ಇದರಿಂದ ಅವರ ಆದಾಯವೂ ದ್ವಿಗುಣಗೊಳ್ಳುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ‘ಹರ್ ಘರ್ ಜಲ್’ (ನಲ್ ಮುಖಾಂತರ ನೀರು) ಯೋಜನೆಯು ಹಳ್ಳಿಗಳಲ್ಲಿ ಸರಿಯಾಗಿ ಅನುಷ್ಠಾನಗೊಳ್ಳದಿದ್ದರೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಸಾರ್ವಜನಿಕರಲ್ಲಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಮನವಿ ಮಾಡಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ, ಆಂಧ್ರಪ್ರದೇಶದ ಜಲಸಂಪನ್ಮೂಲ ಇಲಾಖೆ ಸಚಿವ ಡಾ. ನಿಮ್ಮಲ ರಾಮನಾಯ್ಡು, ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಸಚಿವರಾದ ಪಯ್ಯವುಲ ಕೇಶವ್, ತೆಲಂಗಾಣದ ನೀರಾವರಿ ಇಲಾಖೆ ಹಾಗೂ ಸಿಎಡಿ ಸಚಿವರಾದ ಎನ್.ಉತ್ತಮ್ ಕುಮಾರ ರೆಡ್ಡಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಸಂಸದ ಕೆ. ರಾಜಶೇಖರ ಹಿಟ್ನಾಳ್, ಬಳ್ಳಾರಿ ಸಂಸದ ಈ. ತುಕಾರಾಮ್, ದಾವಣಗೆರೆ ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಶಿವರಾಜ ಎಸ್. ತಂಗಡಗಿ, ಮುನಿರಾಬಾದ್ ತುಂಗಾಭದ್ರಾ ಯೋಜನೆ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನ್‌ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಹೆಚ್.ಆರ್. ಗವಿಯಪ್ಪ, ಎಂ.ಪಿ. ಲತಾ ಮಲ್ಲಿಕಾರ್ಜುನ, ವಿಧಾನಪರಿಷತ್ ಶಾಸಕರುಗಳಾದ ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಬಸನಗೌಡ ಬಾದರ್ಲಿ ಹಾಗೂ ಎನ್.ಎಸ್. ಬೋಸರಾಜು, ಗದಗ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಹೆಚ್.ಕೆ. ಪಾಟೀಲ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ, ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular