HomeLatest NewsBIG NEWS: ಮತದಾರರ ಹೆಸರು ಸೇರ್ಪಡೆ, ರದ್ಧತಿಗೆ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ದೃಢೀಕರಣ ಕಡ್ಡಾಯ

BIG NEWS: ಮತದಾರರ ಹೆಸರು ಸೇರ್ಪಡೆ, ರದ್ಧತಿಗೆ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ದೃಢೀಕರಣ ಕಡ್ಡಾಯ

ನವದೆಹಲಿ: ಮತದಾರರ ಹೆಸರು ಸೇರ್ಪಡೆ ಮತ್ತು ರದ್ಧತಿಗೆ ಆಧಾರ್ ದೃಢೀಕೃತ ಮೊಬೈಲ್ ಸಂಖ್ಯೆ ಮೂಲಕ ಇ- ದೃಢೀಕರಣ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯೋಗ ಕಡ್ಡಾಯ ಮಾಡಿದೆ.

ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲ ಮತದಾರರ ಹೆಸರನ್ನು ಅಕ್ರಮವಾಗಿ ಮತಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದರ ನಡುವೆಯೇ ಸಮಸ್ಯೆ ಪರಿಹಾರಕ್ಕೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಮತದಾರರ ಹೆಸರು ಸೇರ್ಪಡೆ ಮತ್ತು ತೆಗೆಸಲು ಇ- ಪರಿಶೀಲನೆ, ಇ- ದೃಢೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆಧಾರ್ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಮತದಾರರು ನೀಡುವುದು ಕಡ್ಡಾಯವಾಗಿದೆ. ಆನ್ಲೈನ್ ನಲ್ಲಿ ಫಾರ್ಮ್ 7 ಬಳಸಿ ಹೆಸರು ತೆಗೆಸಲಾಗುತ್ತದೆ. ಇದರಲ್ಲಿ ವ್ಯಕ್ತಿಯೊಬ್ಬರ ಹೆಸರು ಅಥವಾ ದೂರವಾಣಿ ಸಂಖ್ಯೆಯನ್ನು ಇನ್ಯಾರೋ ನಮೂದಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಇದನ್ನು ತಡೆಯಲು ನೋಂದಾಯಿತ ಮೊಬೈಲ್ ಸಂಖ್ಯೆಗೆ ಇನ್ನು ಮುಂದೆ ಒಟಿಪಿ ಕಳಿಸಲಾಗುವುದು. ಅದನ್ನು ಹಾಕಿದ ಬಳಿಕ ಪ್ರಕ್ರಿಯೆ ಮುಂದುವರಿಸಲಾಗುವುದು. ಕಳೆದ ವಾರವೇ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular