ಬೆಂಗಳೂರು: ಒಳ ಮೀಸಲಾತಿ ಕುರಿತಂತೆ ಹೈಕೋರ್ಟ್ ನೀಡುವ ತೀರ್ಪಿನ ನಂತರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಆತುರದ ಹೆಜ್ಜೆ ಇಡುವುದು ಬೇಡ, ನ್ಯಾಯಾಲಯದ ಅಭಿಪ್ರಾಯ ತೀರ್ಪಿನ ನಂತರ ಒಳ ಮೀಸಲಾತಿ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವುದು ಸೂಕ್ತವೆನ್ನುವ ಸಲಹೆ ಹಿನ್ನೆಲೆಯಲ್ಲಿ ಸಿಎಂ ಈ ತೀರ್ಮಾನಕ್ಕೆ ಬಂದಿದ್ದಾರೆ.
ಸಭೆಯಲ್ಲಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಜಮೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಎಜಿ ಶಶಿಕಿರಣಶೆಟ್ಟಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
