ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶಗಳಿವೆ ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮಾಹಿತಿ ಹಕ್ಕು ದುರುಪಯೋಗಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಈವರೆಗೆ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಡಾಕಪ್ಪನವರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಹಿತಿ ನೀಡುವ ದರಗಳನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಆಡಳಿತ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಕಾಯ್ದೆ ಅನುಕೂಲವಾಗಿದೆ. ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದ್ದು, ಸದಸ್ಯರು ನಿರ್ದಿಷ್ಟ ಪ್ರಕರಣ ಉಲ್ಲೇಖಿಸಿ ಮಾಹಿತಿ ನೀಡುವಂತೆ ಮನವಿ ಮಾಡಿದರು.