HomeLatest NewsBIG NEWS: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ

BIG NEWS: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶಗಳಿವೆ ಎಂದು ಕಾನೂನು ಸಚಿವರಾದ ಎಚ್‌.ಕೆ.ಪಾಟೀಲ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಮಾಹಿತಿ ಹಕ್ಕು ದುರುಪಯೋಗಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಈವರೆಗೆ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಡಾಕಪ್ಪನವರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಹಿತಿ ನೀಡುವ ದರಗಳನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಆಡಳಿತ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಕಾಯ್ದೆ ಅನುಕೂಲವಾಗಿದೆ. ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದ್ದು, ಸದಸ್ಯರು ನಿರ್ದಿಷ್ಟ ಪ್ರಕರಣ ಉಲ್ಲೇಖಿಸಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular