ಮೈಸೂರು : ನಟ ದರ್ಶನ್ ಪತ್ನಿ ಜೊತೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.
ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪ್ ಕೂಡ ಆಗಮಿಸಿದ್ದರು.
ಆಷಾಡಮಾಸದ 2 ನೇ ಶುಕ್ರವಾರದ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ದೇವಾಲಯದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಡೆವಿಲ್ ಸಿನಿಮಾದಲ್ಲಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಹಾಗೂ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದವರ ಜೊತೆ ಕಳೆಯುತ್ತಿದ್ದಾರೆ.
You Might Also Like
TAGGED:ಚಾಮುಂಡೇಶ್ವರಿ