HomeLatest NewsBIG NEWS: ನಟ ವಿಜಯ್ 'ಟಿವಿಕೆ' ನೋಂದಾಯಿತ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ ಗೆ ಚುನಾವಣಾ...

BIG NEWS: ನಟ ವಿಜಯ್ ‘ಟಿವಿಕೆ’ ನೋಂದಾಯಿತ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ಚೆನ್ನೈ: ತಮಿಳು ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ನೋಂದಾಯಿತ ರಾಜಕೀಯ ಪಕ್ಷವಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಟಿವಿಕೆ ನೋಂದಾಯಿತ ರಾಜಕೀಯ ಪಕ್ಷವಲ್ಲ, ಹಾಗಾಗಿ ಪಕ್ಷದ ಮಾನ್ಯತೆ ರದ್ದುಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ಗೆ ಚುನಾವಣಾ ಆಯೋಗ ತಿಳಿಸಿದೆ. ತಮಿಳುನಾಡಿನ ಕರೂರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಟಿವಿಕೆ ಪಕ್ಷದ ಮಾನ್ಯತೆ ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗೆ ಚುನಾವಣಾ ಆಯೋಗ ಉತ್ತರ ನೀಡಿದೆ.

 ಟಿವಿಕೆ ಪಕ್ಷದ ಮಾನ್ಯತೆ ರದ್ದು ಕೋರಿ ಸಿ. ಸೆಲ್ವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ.ಎಂ. ಶ್ರೀ ವಾಸ್ತವ್ ಹಾಗೂ ನ್ಯಾಯಮೂರ್ತಿ ಅರುಣ್ ಮುರುಗನ್ ಅವರ ಪೀಠದ ಮುಂದೆ ನಡೆದಿದ್ದು, ಚುನಾವಣಾ ಆಯೋಗದ ಪರವಾಗಿ ಹಾಜರಾದ ವಕೀಲ ನಿರಂಜನ್ ರಾಜಗೋಪಾಲ್, ಪ್ರಸ್ತುತ ಟಿವಿಕೆ ನೋಂದಾಯಿತ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಇಲ್ಲ. ಮಾನ್ಯತೆಯನ್ನು ರದ್ದುಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular