BIG NEWS: ಪ್ರಮಾಣವಚನದ ಬೆನ್ನಲ್ಲೇ ಇಂದು ಮೋದಿ ಸರ್ಕಾರದ ಮಹತ್ವದ ಪ್ರಥಮ ‘ಸಚಿವ ಸಂಪುಟ’ ಸಭೆ

ನರೇಂದ್ರ ಮೋದಿಯವರು ಭಾನುವಾರದಂದು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ – ವಿದೇಶಗಳ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳೂ ಸಹ ಪಾಲ್ಗೊಂಡಿದ್ದು ವಿಶೇಷ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೂತನ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮುಂದಿನ ರೂಪುರೇಷೆಗಳ ಕುರಿತು ಅನೌಪಚಾರಿಕ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದು ಬಂದಿದ್ದು, ಈ ಸಂದರ್ಭದಲ್ಲಿ ಮುಂದಿನ 100 ದಿನಗಳ ಕಾಲ ಕೈಗೊಳ್ಳಬೇಕಾದ ಕಾರ್ಯ ಯೋಜನೆಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಇದರ ಜೊತೆಗೆ ನೂತನ ಸಚಿವರಿಗೆ ಹಂಚಿಕೆ ಮಾಡಬೇಕಾದ ಖಾತೆಗಳ ಕುರಿತು ಮೈತ್ರಿಕೂಟದ ಸದಸ್ಯರ ಜೊತೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read