ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯು ಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 25 ರಂದು ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 27 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅಕ್ಟೋಬರ್ 28 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
