BIG NEWS : ಇಂದು ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸಭೆ : ʻಬರ ಪರಿಹಾರʼದ ಕುರಿತು ಮಹತ್ವದ ತೀರ್ಮಾನ

ಮೈಸೂರು : ಡಿಸೆಂಬರ್‌ 23ರ ಇಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23ರಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

ಬರಪರಿಹಾರ ಸೇರಿದಂತೆ ರಾಜ್ಯದ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ ಸರ್ಕಾರ ಈಡೇರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಜೊತೆಗೆ ಮಹಾದಾಯಿ, ಮೇಕೆದಾಟು, ಭದ್ರಾಮೇಲ್ದಂಡೆ ಯೋಜನೆಗಳ ಬಗ್ಗೆ ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150 ದಿನಗಳಿಗೆ ವಿಸ್ತರಿಸುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗಿದೆ ಎಂದರು.

ಪ್ರಧಾನಿ ಮೋದಿಯವರು ಕರ್ನಾಟಕ ಬರ ಪರಿಸ್ಥಿತಿ ಹಾಗೂ ಮೇಲಿನ ಬೇಡಿಕೆಗಳ ಬಗ್ಗೆ ಸಮಾಧಾನಚಿತ್ತರಾಗಿ ಆಲಿಸಿ, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಒಟ್ಟಾರೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಗತ್ಯ ನೆರವು ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read