HomeLatest NewsBIG NEWS: ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಬಗ್ಗೆ ಇಂದು ಸರ್ಕಾರದ ಮಹತ್ವದ ಸಭೆ

BIG NEWS: ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಬಗ್ಗೆ ಇಂದು ಸರ್ಕಾರದ ಮಹತ್ವದ ಸಭೆ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತಾಗಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಎರಡು ಪ್ರಸ್ತಾವನೆಗಳಲ್ಲಿನ ಗೊಂದಲ ನಿವಾರಿಸುವ ಬಗ್ಗೆ ಪರಿಶಿಷ್ಟ ಪಂಗಡ ಇಲಾಖೆಯಲ್ಲಿ ಮಂಗಳವಾರ ಸಭೆ ಆಯೋಜಿಸಲಾಗಿದೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಸಂಬಂಧ ಅನೇಕ ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕಳೆದ ಜುಲೈನಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಎರಡು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯಲ್ಲಿ ರಾಜ್ಯದಲ್ಲಿರುವ ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಉಲ್ಲೇಖಿಸಲಾಗಿತ್ತು.

ನಂತರ ಮತ್ತೊಂದು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರಲ್ಲಿ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿರುವ ಗೊಂಡಾ ಸಮುದಾಯದವರನ್ನು ಕುರುಬ ಸಮುದಾಯದವರೆಂದೇ ಗುರುತಿಸಬೇಕೆಂದು ಉಲ್ಲೇಖಿಸಲಾಗಿದೆ. ಒಂದೇ ತಿಂಗಳಲ್ಲಿ ಸಲ್ಲಿಕೆಯಾದ ಎರಡು ಪ್ರಸ್ತಾವನೆಯಲ್ಲಿ ಗೊಂದಲವಿದ್ದು, ಅದಕ್ಕೆ ಸ್ಪಷ್ಟನೆ ನೀಡುವಂತೆ ಮತ್ತು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಒಳಗೊಂಡ ಜಿಲ್ಲಾವಾರು ಜನಸಂಖ್ಯೆ ಅಂಕಿ ಅಂಶ ನೀಡುವಂತೆ ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲಯ ಆಗಸ್ಟ್ 14ರಂದು ರಾಜ್ಯದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸಲಹೆಗಾರರು ಸೇರಿ ಇತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular