HomeKarnatakaBIG NEWS : ಸ್ವಾತಂತ್ರ್ಯ ದಿನಾಚರಣೆಗೆ ನೌಕರರಿಗೆ ವೇತನ ಸಹಿತ ರಜೆ ನೀಡಲು ಆದೇಶ..!

BIG NEWS : ಸ್ವಾತಂತ್ರ್ಯ ದಿನಾಚರಣೆಗೆ ನೌಕರರಿಗೆ ವೇತನ ಸಹಿತ ರಜೆ ನೀಡಲು ಆದೇಶ..!

ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963 ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964 ರ ನಿಯಮ 9 ರ ಮೇರೆಗೆ ಕೊಡಗು ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್ಗಳು, ರೆಸಾರ್ಟ್ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಪ್ಲಾಂಟೇಷನ್ಗಳು ಹಾಗೂ ಇತರೆ ಸಂಸ್ಥೆಗಳು ಆಗಸ್ಟ್, 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕಡ್ಡಾಯವಾಗಿ ತಮ್ಮಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆ ನೀಡಲು ಸೂಚಿಸಿದೆ.

ತಪ್ಪಿದಲ್ಲಿ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಗಾಗಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಮತ್ತು ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular