BIG NEWS: ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ; ಬೀದರ್ – ಕಲಬುರಗಿಯಲ್ಲೂ ಸೌರ ಉದ್ಯಾನ ನಿರ್ಮಾಣ ಕಾಮಗಾರಿ ಚುರುಕು

ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಜಲ ವಿದ್ಯುತ್ ಸ್ಥಾವರಗಳು ಕೂಡ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರಿಲ್ಲದ ಕಾರಣ ಅಗತ್ಯ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗುತ್ತಿಲ್ಲ.

ಇನ್ನು ಥರ್ಮಲ್ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಕೊರತೆ ಕಾರಣಕ್ಕಾಗಿ ಹಾಗೂ ಪದೇ ಪದೇ ತಲೆದೋರುವ ತಾಂತ್ರಿಕ ಸಮಸ್ಯೆಗಳಿಂದ ನಿರೀಕ್ಷಿತ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಹೊತ್ತು ನೀಡಲು ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.

ಪಾವಗಡದಂತೆ ಬೀದರ್ ಹಾಗೂ ಕಲಬುರಗಿಯಲ್ಲೂ ಎರಡು ಸೌರ ಉದ್ಯಾನಗಳನ್ನು ನಿರ್ಮಿಸುವ ಕಾಮಗಾರಿಗೆ ಚುರುಕು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮೂಲಕ ಸೌರ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಿದೆ. ರಾಜ್ಯದಲ್ಲಿ ಈಗಾಗಲೇ ವಿದ್ಯುತ್ ಕ್ಷಾಮ ತಲೆದೋರಿದ್ದು, ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಕಾರಣ ಸಮಸ್ಯೆಗೆ ಒಂದಷ್ಟು ಪರಿಹಾರ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read