HomeKarnatakaBIG NEWS : ನಟ ‘ದರ್ಶನ್’ ಗೆ ಮತ್ತೊಂದು ಸಂಕಷ್ಟ : ನಾಳೆ ಬಳ್ಳಾರಿ ಜೈಲಲ್ಲಿ...

BIG NEWS : ನಟ ‘ದರ್ಶನ್’ ಗೆ ಮತ್ತೊಂದು ಸಂಕಷ್ಟ : ನಾಳೆ ಬಳ್ಳಾರಿ ಜೈಲಲ್ಲಿ ‘ಐಟಿ’ ಡ್ರಿಲ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಾಳೆ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ಐಟಿ ಡ್ರಿಲ್ ನಡೆಸಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ನಟ ದರ್ಶನ್ ವಿಚಾರಣೆ ನಡೆಸಲು ಐಟಿ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದ್ದು, ನಾಳೆ ಬಳ್ಳಾರಿ ಜೈಲಿಗೆ ಹೋಗಿ ದರ್ಶನ್ ರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಸೆ.27 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಮುಂದೂಡಿಕೆ ಬೆನ್ನಲ್ಲೇ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ಐಟಿ ಡ್ರಿಲ್ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular