ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ 5000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸಾರ್ವಜನಿಕ ಆಸ್ತಿಗಳು ಹಾನಿಯಾಗಿದ್ದು, ಎನ್.ಡಿ.ಆರ್.ಎಫ್. ನಿಯಮದ ಪ್ರಕಾರ ಕೇಂದ್ರ ಸರ್ಕಾರಕ್ಕೆ 1545.23 ಕೋಟಿ ರೂಪಾಯಿ ಆಸ್ತಿ ನಷ್ಟ ಪರಿಹಾರಕ್ಕಾಗಿ ಮನವಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರಕ್ಕೆ 1545 ಕೋಟಿ ರೂ. ಬೆಳೆಹಾನಿ ಪರಿಹಾರಕ್ಕೆ ಮನವಿ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಮೊದಲ ಬಾರಿ ಪರಿಹಾರ ಕೇಳುತ್ತಿದ್ದೇವೆ. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಪರಿಹಾರ ನೀಡಿರುವುದರಿಂದ ರಾಜ್ಯ ಸರ್ಕಾರವು ಅದೇ ರೀತಿ ಪರಿಹಾರ ಕೇಳಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕೆ ಎನ್ಡಿಆರ್ಎಫ್ ಅಡಿಯಲ್ಲಿ ₹1545.23 ಕೋಟಿ ಸಹಾಯಧನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.#CabinetDecisions pic.twitter.com/sNu1Y9LpDP
— Siddaramaiah (@siddaramaiah) October 30, 2025
