BIG NEWS: ರಾಜ್ಯದ ಎಲ್ಲಾ ಪ್ರೌಢಶಾಲೆ ವಿದ್ಯಾರ್ಥಿಗಳೊಂದಿಗೆ ಇಂದು ಗಗನಯಾತ್ರಿ ಶುಭಾಂಶು ಶುಕ್ಲಾ ಸಂವಾದ

ಬೆಂಗಳೂರು: ನ. 25ರಂದು ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಸಂವಾದ ಕಾರ್ಯಕ್ರಮಕ್ಕೆ 10 ನೇ ತರಗತಿ ಮಕ್ಕಳಿಗೆ Online ಮುಖಾಂತರ ಪಾಲ್ಗೊಳ್ಳುವ ಬಗ್ಗೆ ಶಾಲೆಯಲ್ಲಿ ವ್ಯವಸ್ಥೆ ಮಾಡಲು ತಿಳಿಸಲಾಗಿದೆ,

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು(ಕಸೈಟ್ಸ್) ಹಾಗೂ ಜವಾಹರಲಾಲ್ ನೆಹರು ತಾರಾಲಯ(JNP) ಬೆಂಗಳೂರು ಇವರ ಸಹಭಾಗಿತ್ವದಲ್ಲಿ “ಶುಭಾಂಶು ಶುಕ್ಲಾರವರೊಂದಿಗೆ ಸಂವಾದ” ಎಂಬ ವಿಶೇಷ ಕಾರ್ಯಕ್ರಮವನ್ನು ದಿನಾಂಕ: 25/11/2025 ರಂದು ಮಂಗಳವಾರ ಬೆಳಿಗ್ಗೆ: 10 ಗಂಟೆಗೆ ಬೆಂಗಳೂರು ನಗರದ ಜವಾಹರಲಾಲ್‌ ನೆಹರು(JNP)ನಲ್ಲಿ ಆಯೋಜಿಸಲು ಉದ್ದೇಶಿಲಾಗಿದೆ. ಈ ಕಾರ್ಯಕ್ರಮದ ನೇರ ಪ್ರಸಾರ (Live Telecast) ವ್ಯವಸ್ಥೆ ಮಾಡಲಾಗುತ್ತದೆ.

ಈ ಸಂಬಂಧ ಭಾರತದ ಗಗನಯಾತ್ರಿಯಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು Axiom Mission 4 ಯೋಜನೆಯಡಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಹಾಗೂ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ವ್ಯಕ್ತಿವಾಗಿರುವುದರಿಂದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನಾಭಿವೃದ್ಧಿ ಮತ್ತು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಆಸಕ್ತಿಯನ್ನು ಉತ್ತೇಜಿಸುವ ಮಹತ್ವದ ಅವಕಾಶವಾಗಿದೆ.

ಈ ಹಿನ್ನೆಲೆಯಲ್ಲಿ “ಶುಭಾಂಶು ಶುಕ್ಲಾರವರೊಂದಿಗೆ ಸಂವಾದ” ಕಾರ್ಯಕ್ರಮವು ನೇರ ಪ್ರಸಾರ(Live Telecast) ವಾಗುವುದರಿಂದ ಸದರಿ ಕಾರ್ಯಕ್ರಮದಲ್ಲಿ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲಭ್ಯವಿರುವ Interactive Pannel/Smart Board/LED Screen ಫೋಟೋವನ್ನು ವಾಟ್ಸ್ ಆಪ್ ಗ್ರೂಪ್ ನಲ್ಲಿ ಶೇರ್ ಮಾಡಿಕೊಳ್ಳಲು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read