HomeLatest NewsBIG NEWS : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ...

BIG NEWS : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

ಬೆಂಗಳೂರು : ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

ಅಲ್ಲಿಯವರೆಗೂ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ ಎಂದು ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular