BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ದಿ:01.04.2006 ಅಧಿಸೂಚನೆಗಳ ಪೂರ್ವದಲ್ಲಿನ ನೇಮಕಾತಿ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30.06.2024ರೊಳಗ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು.

ಮುಂದುವರೆದು, ದಿನಾಂಕ:24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read