HomeKarnatakaBIG NEWS : 'ರಾಜ್ಯ ಸರ್ಕಾರಿ' ನೌಕರರ ಗಮನಕ್ಕೆ : 'ಹಳೆಯ ಪಿಂಚಣಿ' (OPS) ಗೆ...

BIG NEWS : ‘ರಾಜ್ಯ ಸರ್ಕಾರಿ’ ನೌಕರರ ಗಮನಕ್ಕೆ : ‘ಹಳೆಯ ಪಿಂಚಣಿ’ (OPS) ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

ಹಳೆಯ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ
2) ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡಬೇಕು

3) ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕದ ಪ್ರತಿ
4) ನೇಮಕಾತಿ ಆದೇಶ ದಿನಾಂಕ ಪ್ರತಿ
5) ಪ್ರಸ್ತುತ ವೇತನ ಚೀಟಿ
6) ಕೆಜಿಐಡಿ (KGID)ಸಂಖ್ಯೆ
7) NPS ಪ್ರಾನ್ ಸಂಖ್ಯೆ
8) ಕೆಲಸ ಮಾಡುತ್ತಿರುವ ಕಚೇರಿ ವಿಳಾಸ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular