HomeKarnatakaBIG NEWS: ಪ್ಯಾರಾಸಿಟಮೋಲ್ ಸೇರಿ 15 ಅಸುರಕ್ಷಿತ ಔಷಧ, ಸೌಂದರ್ಯವರ್ಧಕ ಬಳಕೆ ನಿಷೇಧ: ಆರೋಗ್ಯ ಇಲಾಖೆ...

BIG NEWS: ಪ್ಯಾರಾಸಿಟಮೋಲ್ ಸೇರಿ 15 ಅಸುರಕ್ಷಿತ ಔಷಧ, ಸೌಂದರ್ಯವರ್ಧಕ ಬಳಕೆ ನಿಷೇಧ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಔಷಧ, ಸೌಂದರ್ಯವರ್ಧಕಗಳ ಬಳಕೆಗೆ ಕರ್ನಾಟಕ ಆರೋಗ್ಯ ಇಲಾಖೆ ನಿರ್ಬಂಧ ಹೇರಿದೆ.

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಔಷಧಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಸುವ ಪ್ಯಾರಾಸಿಟಮೋಲ್ ಸೇರಿದಂತೆ ಹಲವು ಔಷಧ, ಸೌಂದರ್ಯವರ್ಧಕಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಈ ಕೆಳಗಿನ ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular