HomeLatest NewsBIG NEWS: ಇಂದಿನಿಂದಲೇ ರಾಜ್ಯಾದ್ಯಂತ 36 ಸಾವಿರ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸರ್ಕಾರ ಆದೇಶ:...

BIG NEWS: ಇಂದಿನಿಂದಲೇ ರಾಜ್ಯಾದ್ಯಂತ 36 ಸಾವಿರ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸರ್ಕಾರ ಆದೇಶ: ಅಭಿಯಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ರಾಜ್ಯದ 36 ಸಾವಿರ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಅಥವಾ ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಪ್ಲಾಸ್ಟಿಕ್ ಲೋಟ ಕೂಡ ಬಳಸಿದಂತೆ ಸರ್ಕಾರ ಆದೇಶಿಸಿದೆ.

ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ಬಳಕೆಗೆ ಸರ್ಕಾರ ನಿಷೇಧ ಹೇರಿದ್ದು, ಇಂದು ಅಧಿಕೃತವಾಗಿ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಪರಿಸರ, ಆರೋಗ್ಯಕ್ಕೆ ಮಾರಕವಾಗುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇಂದು ಅಭಿಯಾನಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗವಿಪುರಂನಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular