ಬೆಂಗಳೂರು: ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ 184 ಕೇಂದ್ರಗಳನ್ನು ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಈ ಕುರಿತಾಗಿ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಗಳ ನಿರಾಕರಣೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಅಧಿಕ ಜನೌಷಧ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.
ಔಷಧ ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ತಗ್ಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಪಡೆಯುವ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಆವರಣಗಳ ಹೊರಗಿರುವ ಜನೌಷಧ ಕೇಂದ್ರಗಳನ್ನು ನಿರ್ಬಂಧಿಸಿಲ್ಲ. ಜನರು ತಮ್ಮ ಆಯ್ಕೆಯಂತೆ ಈ ಕೇಂದ್ರಗಳಿಗೆ ಭೇಟಿ ನೀಡಿ ಔಷದ ಪಡೆದುಕೊಳ್ಳಲು ಸ್ವತಂತ್ರರಾಗಿದ್ದಾರೆ. ಆಸ್ಪತ್ರೆ ಆವರಣದಲ್ಲಿರುವ 184 ಕೇಂದ್ರಗಳನ್ನು ಮಾತ್ರ ನಿರ್ಬಂಧಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
Shri @JPNadda avare,
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 6, 2025
I would like to clarify, Government of Karnataka's stand on Janaushadhi Kendras
ಶ್ರೀ ಜೆ.ಪಿ. ನಡ್ಡಾ ಅವರೇ,
ಜನೌಷಧಿ ಕೇಂದ್ರಗಳ ಬಗ್ಗೆ ಕರ್ನಾಟಕ ಸರ್ಕಾರದ ನಿಲುವನ್ನು ಈ ಮೂಲಕ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ pic.twitter.com/3mNiyJd20M