BIG NEWS : ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಶೃಂಗಸಭೆ’ ಆಯೋಜನೆ |Bangalore Tech Summit

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ ಇಂದು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.

ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ.

ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ. ಶೃಂಗಸಭೆಯಲ್ಲಿ ಕೈಗಾರಿಕೆ ಹಾಗೂ ವ್ಯವಹಾರಗಳನ್ನು ಮರುರೂಪಿಸುತ್ತಿರುವ ತಾಂತ್ರಿಕ ಪ್ರಗತಿಗಳು ಮತ್ತು ಪ್ರವೃತ್ತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read