ಬೆಂಗಳೂರು : ‘ಸಾಲ ಮನ್ನಾ’ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ರೈತ ಸಂಘಟನೆಗಳು ಫೆ.17 ರಂದು ಮತ್ತೆ ಬೆಂಗಳೂರು ಚಲೋ ನಡೆಸಲಿದೆ.
ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ರಾಜ್ಯದ ರೈತರು ಫೆ.17 ರಂದು ಮತ್ತೆ ಬೆಂಗಳೂರು ಚಲೋ ನಡೆಸಲಿದೆ. ಈಗಾಗಲೇ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಬೆಂಗಳೂರು ಚಲೋ ನಡೆಸಲು ಸಜ್ಜಾಗಿದೆ.
ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು ರೈತ ಮಹಿಳೆಯರು ಭಾಗಿಯಾಗಲಿದ್ದಾರೆ.
ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ನಡೆಸಲಿದ್ದಾರೆ.