BIG NEWS: ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಕೇಸ್: 40 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) 40 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ನಿಗಮದ ಪ್ರಧಾನ ವ್ಯವಸ್ಥಾಪಕ ಡಾ. ಬಿ.ಕೆ. ನಾಗರಾಜಪ್ಪ, ಹಿಂದಿನ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಮತ್ತಿತರರಿಗೆ ಸೇರಿದ 40 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿಗಳನ್ನು ಇಡಿ ಮುಟ್ಟುಗೊಲು ಹಾಕಿಕೊಂಡಿದೆ.

ಭೋವಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 750ಕ್ಕೂ ಅಧಿಕ ನಕಲಿ ಫಲಾನುಭವಿಗಳ ಹೆಸರಲ್ಲಿ ನೂರಾರು ಕೋಟಿ ರೂಪಾಯಿ ಸಾಲ ಮಂಜೂರು ಮಾಡಿ ಅದನ್ನು ತಮ್ಮ ಹಿಡಿತದಲ್ಲಿರುವ ಕಂಪನಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ಅಕ್ರಮ ಎಸಗಿದ ಆರೋಪ ಹಿನ್ನೆಲೆಯಲ್ಲಿ ನಾಗರಾಜಪ್ಪ, ಲೀಲಾವತಿ, ಇತರರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಇಡಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ನಾಗರಾಜಪ್ಪ ಅವರನ್ನು ಏಪ್ರಿಲ್ 5ರಂದು ಬಂಧಿಸಲಾಗಿತ್ತು. ಏಪ್ರಿಲ್ 12ರಂದು ಲೀಲಾವತಿ ಅವರನ್ನು ಬಂಧಿಸಿದ್ದು, ಇಬ್ಬರೂ ನ್ಯಾಯಾಂಗ ವಶದದಲ್ಲಿದ್ದಾರೆ.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ(ಕೆಬಿಡಿಸಿ) ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ, ಪಿಎಂಎಲ್‌ಎ, 2002 ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರು ವಲಯ ಕಚೇರಿಯ ಇಡಿ, ಬಿ ಕೆ ನಾಗರಾಜಪ್ಪ, ಶ್ರೀಮತಿ ಆರ್ ಲೀಲಾವತಿ ಮತ್ತು ಇತರ ಆರೋಪಿಗಳಿಗೆ ಸೇರಿದ ರೂ. 26.27 ಕೋಟಿ (ಅಂದಾಜು) (ಪ್ರಸ್ತುತ ಮಾರುಕಟ್ಟೆ ಮೌಲ್ಯ ರೂ. 40 ಕೋಟಿ) ಮೌಲ್ಯದ ವಿವಿಧ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read