BIG NEWS : ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ ಕ್ಕೆ ಭರ್ಜರಿ ಗುಡ್ ನ್ಯೂಸ್.!

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಹಾಗೂ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಸರ್ಕಾರ ಘೋಷಿಸಿದೆ. 

•ಬೀದರ್ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ₹1 ಕೋಟಿ ಅನುದಾನ ಮಂಜೂರು

• 267 ವಕ್ಸ್ ಆಸ್ತಿಗಳ ಸಂರಕ್ಷಣೆ ಮತ್ತು ಅವುಗಳ ಅಭಿವೃದ್ಧಿಗಾಗಿ ₹22.87 ಕೋಟಿ ಅನುದಾನ
• ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ₹231.81 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಕೆ.ಎಂ.ಡಿ.ಸಿ.ಯ ಮುಖಾಂತರ ಅನುಷ್ಠಾನ
• ಜೆಇಇ/ನೀಟ್/ಸಿಇಟಿ ಪರೀಕ್ಷೆಗಳಿಗೆ 6,000 ಅಭ್ಯರ್ಥಿಗಳಿಗೆ ತರಬೇತಿ
• ಗ್ರೂಪ್ – ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 500 ಅಭ್ಯರ್ಥಿಗಳಿಗೆ ತರಬೇತಿ

• 100 ಸಂಖ್ಯಾಬಲವುಳ್ಳ 96 ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಿದ್ಯಾರ್ಥಿನಿಲಯಗಳು ಪ್ರಾರಂಭ
• 50 ಹೊಸ ಮೌಲಾನಾ ಆಜಾದ್ ಶಾಲೆಗಳು ಆರಂಭ
• 50 ಸಂಖ್ಯಾಬಲವುಳ್ಳ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಪ್ರಾರಂಭ
• 25 ಮೌಲಾನಾ ಆಜಾದ್ ಶಾಲೆಗಳಲ್ಲಿ ಪದವಿ ಪೂರ್ಣ ಶಿಕ್ಷಣ ಆರಂಭ
• ₹2 ಕೋಟಿ ಅನುದಾನದಲ್ಲಿ ಸಿಖ್ಲಿಗಾರ್ ಸಮುದಾಯದವರ ಸಬಲೀಕರಣಕ್ಕಾಗಿ ಹೊಸ ಯೋಜನೆಗಳು

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read