HomeKarnatakaBIG NEWS : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಗೆ ಬಿಗ್‌ ಶಾಕ್‌ : ಮಾಜಿ...

BIG NEWS : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಗೆ ಬಿಗ್‌ ಶಾಕ್‌ : ಮಾಜಿ ಸಚಿವ ʻಮನೋಹರ್‌ ತಹಸೀಲ್ದಾ‌ರ್ʼ ಬಿಜೆಪಿ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಮಾಜಿ ಸಚಿವ ಮನೋಹತ್‌ ತಹಸೀಲ್ದಾರ್‌ ಅವರು ಅಧಿಕೃತವಾಗಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಿನ್ನೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಜಿ ಸಚಿವರಾದ ಮನೋಹರ್‌ ತಹಸೀಲ್ದಾರ್‌ ಮತ್ತು ಅವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular