HomeKarnatakaBIG NEWS : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ : ಇಂದಿನಿಂದ 'BBMP' ಸರ್ವೆ...

BIG NEWS : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ : ಇಂದಿನಿಂದ ‘BBMP’ ಸರ್ವೆ ಕಾರ್ಯ ಆರಂಭ..!

ಬೆಂಗಳೂರು : ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಬಿಬಿಎಂಪಿ ಸರ್ವೆ ಕಾರ್ಯ ಆರಂಭವಾಗಲಿದೆ.

ಅಕ್ರಮ ಕಟ್ಟಡ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಇಂದಿನಿಂದ ಫೀಲ್ಡ್ ಗೆ ಇಳಿಯಲಿದ್ದಾರೆ. ಸರ್ವೆ ಮಾಡಿ ಅಕ್ರಮ ಕಟ್ಟಡ ತೆರವುಗೊಳಿಸಲಿದ್ದಾರೆ.

ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿದು ದುರಂತ ಸಂಭವಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕಟ್ಟಡಗಳ ಸರ್ವೆ ಕಾರ್ಯಕ್ಕೆ ಸೂಚನೆ ನೀಡಿದೆ.ಬಾಬುಸಾಪಾಳ್ಯದಲ್ಲಿ ನಿರ್ಮಾಣಹಂತದ ಕಟ್ಟಡ ಕುಸಿದು 8 ಜನರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಬೆಂಗಳೂರುನ ಹಲವು ಕಟ್ಟಡಗಳು ಕುಸಿಯುವ ಹಂತದಲ್ಲಿರುವ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ಬೆಂಗಳೂರು ನಗರದಾದ್ಯಂತ ಕಟ್ಟಡಗಳ ಸರ್ವೆ ಕಾರ್ಯ ಆರಂಭಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸಮೀಕ್ಷೆ ಆರಂಭವಾಗಲಿದ್ದು, ಪರವಾನಿಗೆ, ಸ್ಪಾಟ್ ಸರ್ವೆ, ಫೋಟೋ, ಜಿಪಿ ಆರ್ ಎಸ್ ಇತ್ಯಾದಿಗಳನ್ನು ಒಳಗೊಂಡು ಸಮೀಕ್ಷೆ ನಡೆಸಲಾಗುತ್ತದೆ. ಅನಧಿಕೃತ ಕಟ್ಟಡಗಳಿಗೆಸ್ಥಳದಲ್ಲೇ ಸೀಲ್ ಮಾಡಲಾಗುವುದು. ಬೆಂಗಳೂರು ನಗರದಲ್ಲಿ 700ಕ್ಕೂ ಹೆಚ್ಚು ಶಿಥಿಲಗೊಂಡ ಕಟ್ಟಡಗಳಿವೆ ಎಂದು ಅಂದಾಜಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular