HomeKarnatakaBIG NEWS : ಹೊಸ 'ರೇಷನ್ ಕಾರ್ಡ್' ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.!

BIG NEWS : ಹೊಸ ‘ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.!

ಹೊಸ ರೇಷನ್ ಕಾರ್ಡ್ ಪಡೆಯಲು ಮುಂದಾದವರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಹಂಚಿಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿದ ಗುರಿ ಮುಗಿದಿರುವುದರಿಂದ ಹೊಸ ರೇಷನ್ ಕಾರ್ಡ್ ವಿತರಣಾ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಅನರ್ಹ ರೇಷನ್ ಕಾರ್ಡ್ ರದ್ದು ಮಾಡಿದ ನಂತರ ಮಾತ್ರ ಹೊಸ ರೇಷನ್ ಕಾರ್ಡ್ ನೀಡುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ರೇಷನ್ ಕಾರ್ಡ್ ನಿಗದಿ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶವಿಲ್ಲ. ಅನರ್ಹರ ಕಾರ್ಡ್ ರದ್ದು ಮಾಡುವವರೆಗೂ ಹೊಸ ಕಾರ್ಡ್ ಗಳನ್ನು ಕೊಡುವುದಿಲ್ಲ ಎಂದರು.
ಹೀಗಾಗಿ ಹೊಸ ಅರ್ಜಿ ಹಾಕಿರುವ ಜನರು ಬಿಪಿಎಲ್ ಕಾರ್ಡ್ ಗಳಿಗಾಗಿ ಕಾಯಬೇಕು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಕೊಡಲು ಸರ್ಕಾರದಲ್ಲಿ ಅವಕಾಶವಿಲ್ಲ. ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಕಲಿ ದಾಖಲೆಗಳ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವವರನ್ನು ಎಪಿಎಲ್ ರೇಷನ್ ಕಾರ್ಡ್ ವರ್ಗಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಸ್ವಯಂ ಪ್ರೇರಿತವಾಗಿ ತಮ್ಮ ಪಡಿತರ ರೇಷನ್ ಕಾರ್ಡ್ ಅನ್ನು ಹಿಂತಿರುಗಿಸಿದರೆ, ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ನೀಡಲು ಸಾಧ್ಯವಾಗಲಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular