BIG NEWS : ಬೆಳಗಾವಿಯಲ್ಲಿ ಮಕ್ಕಳ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಈ ಕಾರಣಕ್ಕೆ ಕಿಡ್ನ್ಯಾಪ್..!

ಬೆಳಗಾವಿ : ಬೆಳಗಾವಿಯಲ್ಲಿ ಮಕ್ಕಳ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಕಾರಣಕ್ಕೆ ಮಕ್ಕಳನ್ನು ಅಪಹರಿಸಲಾಗಿದೆ ಎಂದು ತಿಳಿದು ಬಂದಿದೆ.

ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕಿಡ್ನ್ಯಾಪ್ ಆಗಿದ್ದ ಮಕ್ಕಳ ತಂದೆ ವಿಜಯ್ ಆರೋಪಿಗಳ ಬಳಿ ಕೋಟ್ಯಾಂತರ ರೂ ಹಣ ಪಡೆದಿದ್ದನು. ಕೊಟ್ಟ ಹಣ ವಾಪಸ್ ನೀಡದಿದ್ದಕ್ಕೆ ಆರೋಪಿಗಳು ವಿಜಯ್ ಮಕ್ಕಳನ್ನು ಕಿಡ್ನ್ಯಾಪ್   ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಹರಣದ ಆರೋಪಿ ಸಾಂಬಾ ರಾವಸಾಬ್ ಕಾಂಬಳೆ(25) ಕಾಲಿಗೆ ಗುಂಡು ಹಾರಿಸಲಾಗಿದೆ. ಬಂಧನದ ವೇಳೆ ಪಿಎಸ್ಐ ಮತ್ತು ಸಿಬ್ಬಂದಿ ಮೇಲೆ ಆರೋಪಿ ಸಾಂಬಾ ರಾವ್ ಕಲ್ಲು ತೂರಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಮೂವರ ಪೈಕಿ ಓರ್ವನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಹಲವು ದಿನಗಳಿಂದ ಆರೋಪಿಗಳು ವಾಪಸ್ ಕೊಡುವಂತೆ ಕೇಳುತ್ತಿದ್ದರು ಎನ್ನಲಾಗಿದೆ. ಹಣ ವಾಪಸ್ ನೀಡದಿದ್ದಕ್ಕೆ ನಿನ್ನೆ ಮಧ್ಯಾಹ್ನ ಮನೆಗೆ ನುಗ್ಗಿ ಮಕ್ಕಳನ್ನು ಅಪಹರಿಸಿದ್ದರು. ಹಣ ಕೊಟ್ಟು ಮಕ್ಕಳನ್ನು ಬಿಡಿಸಿಕೊಳ್ಳುವಂತೆ ಆರೋಪಿಗಳು ಹೇಳಿದ್ದರು. ಈ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read