HomeKarnatakaBIG NEWS: BJP ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ; ಸುಳಿವು ನೀಡಿದ ಸಿಎಂ

BIG NEWS: BJP ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ; ಸುಳಿವು ನೀಡಿದ ಸಿಎಂ

ನವದೆಹಲಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮ್ಯಾರಥಾನ್ ಸಭೆ ನಡೆಸಿದರೂ ಕೆಲ ಕ್ಷೇತ್ರಗಳ ಟಿಕೆಟ್ ಘೋಷಣೆ ವಿಚಾರ ಕಗ್ಗಂಟಾಗಿದೆ ಎನ್ನಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಆದರೆ ಇನ್ನೂ ಚರ್ಚೆಗಳಿರುವುದರಿಂದ ನಾಳೆ, ನಾಡಿದ್ದು ಮೊದಲ ಪಟ್ಟಿ ಬಿಡುಗಡೆಯಾಗಬಹುದು ಎಂದರು.

ಅಭ್ಯರ್ಥಿಗಳ ಬಗ್ಗೆ ಗೊಂದಲಗಳೇನೂ ಇಲ್ಲ, ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ದಾ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವಿಚಾರವಾಗಿ ಚರ್ಚೆ ನಡೆದಿದೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದ್ದು, ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವುದು ಬಹುತೇಕ ಖಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular