HomeKarnatakaBIG NEWS : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ :...

BIG NEWS : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM ಸಿದ್ದರಾಮಯ್ಯ’ ಸ್ಪೋಟಕ ಹೇಳಿಕೆ..!

ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP  ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ. ಬಿ.ವೈ. ವಿಜಯೇಂದ್ರ ಹೇಳಿದ್ದಾರೆ ಎಂದು ರಾಜೀನಾಮೆ ನೀಡಲು ಸಾಧ್ಯವೇ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಶಾಸಕರು, ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಸಿಗಬೇಕಿದೆ ಎಂದರು.

ಮಹದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. ನಿನ್ನೆ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು, 1.66 ರಷ್ಟು ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರು 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular