HomeLatest NewsBIG NEWS: ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ರಚನೆ: ಬಿ.ವೈ. ವಿಜಯೇಂದ್ರ ಮಾಹಿತಿ

BIG NEWS: ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ರಚನೆ: ಬಿ.ವೈ. ವಿಜಯೇಂದ್ರ ಮಾಹಿತಿ

ಬೆಂಗಳೂರು: ಬಿಜೆಪಿ -ಜೆಡಿಎಸ್ ಸಮನ್ವಯ ಸಮಿತಿ ರಚಿಸಲು ಯೋಜಿಸಲಾಗಿದೆ. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಸಮಿತಿ ರಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ವಿಜಯೇಂದ್ರ ಮಾತನಾಡಿ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತಂತೆ ಭೇಟಿಯ ವೇಳೆ ಚರ್ಚೆ ನಡೆದಿದೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಬಗ್ಗೆ ಚರ್ಚಿಸಿ ಸಲಹೆ ಪಡೆದುಕೊಂಡಿದ್ದೇನೆ ಎಂದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ರಚಿಸಿ, ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ರಚಿಸುವಂತೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. 8- 10 ದಿನಗಳಲ್ಲಿ ಹೆಸರು ಕಳುಹಿಸುವುದಾಗಿ ಹೇಳಿದ್ದಾರೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಲಾಗಿದೆ ಎಂದು ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular