BIG NEWS : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್ : ಬಿಜೆಪಿ ವಿರುದ್ಧ ಶಾಸಕ ಯತ್ನಾಳ್ ವಾಗ್ಧಾಳಿ

ಬೆಂಗಳೂರು : ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ.

ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ. ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು. ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ. ವಿನಯ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಓಂ ಶಾಂತಿ ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read