HomeKarnatakaBIG NEWS : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

BIG NEWS : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪರನ್ನು ಬಂಧನ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ ಜಾರಿಮಾಡುವಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್ ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪರನ್ನು ಬಂಧನ ಮಾಡಲಾಗುತ್ತದೆ ಎಂದರು. ಯಾರಾದರೂ ಆಗಲಿ ಕಾನೂನನ್ನು ಗೌರವಿಸಬೇಕು, ವಿಚಾರಣೆಗೆ ಹಾಜರಾಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬಂಧನದ ಭೀತಿಯಲ್ಲಿರುವ ಯಡಿಯೂರಪ್ಪ ನಿರೀಕ್ಷಣಾ ಜಾಮೀನಿಗೆ ಕೂಡ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular