BIG NEWS : ಮಂಡ್ಯದಲ್ಲಿ ರೈತರ ಜೊತೆ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಬಿ.ವೈ ವಿಜಯೇಂದ್ರ .!

ಮಂಡ್ಯ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ರೈತರ ಜೊತೆಗೆ ಭತ್ತ ನಾಟಿ ಮಾಡಿ, ಅನ್ನದಾತರ ಸಂಭ್ರಮದೊಂದಿಗೆ ಭಾಗಿಯಾದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಸಿ.ನಾರಾಯಣಗೌಡ, ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರಾದ ಇಂದ್ರೇಶ್ ಕುಮಾರ್, ಮುಖಂಡರಾದ ಇಂಡವಾಳು ಸಚ್ಚಿದಾನಂದನ್, ಅಶೋಕ್ ಜಯರಾಂ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತಬಂಧುಗಳು ಉಪಸ್ಥಿತರಿದ್ದರು.

ರಾಜ್ಯ ಭೀಕರ ಬರಗಾಲ ಎದುರಿಸುತ್ತಿದೆ, ರೈತರು ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಗಳು ರೈತ ಪರವಾದ ಬಜೆಟ್ ಮಂಡಿಸಬೇಕೆಂದು ಆಗ್ರಹಿಸುತ್ತೇನೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 25 ಸಾವಿರ ರೂಪಾಯಿಗಳಲ್ಲಿ ರೈತರ ಹೊಲಕ್ಕೆ ವಿದ್ಯುತ್ ಸಂಪರ್ಕ ಸಾಧ್ಯವಾಗುತ್ತಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2 ರಿಂದ 3 ಲಕ್ಷ ವ್ಯಯಿಸಬೇಕಾಗಿದೆ. ಇದು ಬಡವರ ವಿರೋಧಿ ಸರ್ಕಾರ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read