ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗಿಕರಣದ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಯಾವ ನಿರ್ಧಾರ ಕೈಗೊಳ್ಳಲಾಗುವುದು ಎನ್ನುವ ಬಗ್ಗೆ ಕುತೂಹಲ ಮೂಡಿದೆ.
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಬಗ್ಗೆ ಪರ, ವಿರೋಧ ಅಭಿಪ್ರಾಯಗಳಿಂದ ಗಮನ ಸೆಳೆದ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಮಂಗಳವಾರ ವಿಶೇಷ ಸಚಿವ ಸಂಪುಟದ ಮುಂದೆ ಚರ್ಚೆಗೆ ಬರಲಿದ್ದು, ಸಂಪುಟದ ತೀರ್ಮಾನ ಏನಾಗಲಿದೆ ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಪರಿಶಿಷ್ಟ ಜಾತಿಗಳಲ್ಲಿನ 101 ಉಪಜಾತಿಗಳನ್ನು ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ, ಸರ್ಕಾರದ ಉದ್ಯೋಗದಲ್ಲಿ ಪ್ರಾತಿನಿತ್ಯದ ಮಾನದಂಡ ಆಧರಿಸಿ 5 ವರ್ಗೀಕರಣದೊಂದಿಗೆ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ವರದಿ ನೀಡಿದೆ. ಈ ವರದಿಯ ಬಗ್ಗೆ ಪರಿಶಿಷ್ಟರಲ್ಲಿಯೇ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಬೆಳವಣಿಗೆಗಳ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.